ದೊಡ್ಡಬಳ್ಳಾಪುರ : ಹುಟ್ಟುಹಬ್ಬದ ದಿನದಂದು ಅನಾವಶ್ಯಕವಾಗಿ ದುಂದುವೆಚ್ಚ ಮಾಡುವುದರ ಬದಲಾಗಿ ಸ್ನೇಹಿತರ ಸಹಯೋಗದಲ್ಲಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಅನುಕೂಲವಾಗುವಂತೆ ಬ್ರೆಡ್ ಹಣ್ಣು ಬಿಸ್ಕೆಟ್ ವಿತರಣೆ ಮಾಡಲಾಗಿದೆ ಎಂದು ಅನ್ವಿತ್ ಎಂಟರ್ಪ್ರೈಸಸ್ ನ ಮಾಲೀಕರು ಹಾಗೂ ರಾಜಘಟ್ಟ ಗ್ರಾಮ ಪಂಚಾಯತಿ ಸದಸ್ಯ ಎ ಶಿವಕುಮಾರ್ ತಿಳಿಸಿದರು.

ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗಾಗಿ ಆಯೋಜನೆ ಮಾಡಲಾಗಿದ್ದ ಬ್ರೆಡ್,ಹಣ್ಣು, ಬಿಸ್ಕೆಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಳೆದ ಐದು ವರ್ಷಗಳಿಂದ ನಿರಂತರವಾಗಿ ನನ್ನ ಹುಟ್ಟು ಹಬ್ಬದ ದಿನದಂದು ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೇನೆ ಅಂತೆಯೇ ಈ ಬಾರಿಯೂ ಹಣ್ಣು ಹಂಪಲು ವಿತರಿಸಿದ್ದೇನೆ ಜೊತೆಗೆ ಹತ್ತನೇ ತರಗತಿ ಹಾಗೂ ಪಿಯುಸಿಯಲ್ಲಿ 80ಕ್ಕಿಂತ ಹೆಚ್ಚು ಅಂಕ ಪಡೆದ ಸುಮಾರು 130 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಈ ಬಾರಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿರುವುದು ಸಂತಸ ತಂದಿದೆ ಎಂದರು.

ರಾಜಘಟ್ಟ ಗ್ರಾಮಪಂಚಾಯತಿ ಸದಸ್ಯ ಎ. ಶಿವಕುಮಾರ್ ರವರಿಗೆ ತಾಲೂಕಿನ ಶಾಸಕರಾದ ಧೀರಜ್ ಮುನಿರಾಜು, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಬಿ ಮುನೇಗೌಡ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಹರೀಶ್ ಗೌಡ, ಕೆಪಿಸಿಸಿ ಸದಸ್ಯ ಮುನಿರಾಜು ಸೇರಿದಂತೆ ಹಲವು ಗಣ್ಯರು ಶುಭಹಾರೈಸಿದರು.
130ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ :
ರಾಜಘಟ್ಟ ಗ್ರಾಮ ಪಂಚಾಯತಿ ಸದಸ್ಯ ಏ ಶಿವಕುಮಾರ್ ತಮ್ಮ ಹುಟ್ಟು ಹಬ್ಬದ ಅಂಗವಾಗಿ ರಾಜ್ಯಘಟ್ಟ ಗ್ರಾಮ ಹಾಗೂ ತಾಲೂಕಿನ ಸುಮಾರು 130ಕ್ಕೂ ಅಧಿಕ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ವಿದ್ಯಾರ್ಥಿಗಳು ತಮ್ಮ ಪೋಷಕರೊಟ್ಟಿಗೆ ಬಂದು ಪ್ರತಿಭಾ ಪುರಸ್ಕಾರ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ರಾಜಘಟ್ಟ ಗ್ರಾಮದ ಮುಖಂಡ ಬಿ.ಎಸ್. ಹರೀಶ್ ಮಾತನಾಡಿ ಎ. ಶಿವಕುಮಾರ್ ಅವರು ರಾಜಘಟ್ಟ ಪಂಚಾಯತಿ ಸದಸ್ಯರಾದಾಗಿಂದ ವಿಶೇಷವಾಗಿ ತಾಲೂಕು ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಬ್ರೆಡ್ ಬಿಸ್ಕೆಟ್ ಹಣ್ಣು ಹಂಪಲು ನೀಡುವುದು, ಅನಾಥಾಶ್ರಮದ ಮಕ್ಕಳಿಗೆ ಸಿಹಿ ಹಂಚುವುದು ಹಾಗೂ ಹಲವು ಸಮಾಜ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ತಮ್ಮ ಹುಟ್ಟುಹಬ್ಬದ ಆಚರಿಸಿಕೊಳ್ಳುವುದು ವಿಶೇಷ. ಈ ಬಾರಿ ಅನ್ವಿತ್ ಎಂಟರ್ಪ್ರೈಸಸ್ ವತಿಯಿಂದ ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಎಸ್ ಎಲ್ ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಸ್ಥಳೀಯ ಗ್ರಾಮಸ್ಥರಿಗೆ ಹಾಗೂ ತಾಲ್ಲೂಕಿನ ಸಾರ್ವಜನಿಕರಿಗೆ ಆಕಾಶ್ ಆಸ್ಪತ್ರೆ ಸಹಾಯದೊಂದಿಗೆ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಹುಟ್ಟು ಹಬ್ಬವನ್ನು ದುಂದು ವೆಚ್ಚ ಮಾಡಿ ವ್ಯರ್ಥ ಮಾಡುವ ಬದಲು ಇಂತಹ ಉತ್ತಮ ಸಮಾಜ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಆಚರಿಸಿಕೊಳ್ಳುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎ ಶಿವಕುಮಾರ್ ರವರಿಗೆ ಮುಂದೆ ಮತ್ತಷ್ಟು ಸಮಾಜ ಸೇವೆ ಮಾಡುವ ಅವಕಾಶ ದೊರೆಯಲ್ಲಿ ಎಂದು ಶುಭಹಾರೈಸಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರ :
ಅನ್ವಿತ್ ಎಂಟರ್ಪ್ರೈಸಸ್ ವತಿಯಿಂದ ರಾಜಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಅನುಕೂಲಕ್ಕಾಗಿ ಆಕಾಶ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ ಶಿಬಿರದಲ್ಲಿ ಉಚಿತವಾಗಿ ಬಿಪಿ, ಶುಗರ್, ಮಂಡಿ ನೋವು, ಕಣ್ಣಿನ ಪರೀಕ್ಷೆ ಮಾಡಲಾಯಿತು ಹಾಗೂ ಉಚಿತ ಔಷಧಿ ವಿತರಣೆ ಮಾಡಲಾಯಿತು .

ಈ ವೇಳೆ ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ಮುಖಂಡ ಬಿ.ಮುನೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರ್, ರಾಜಘಟ್ಟ ವಿಎಸ್ಎಸ್ಎನ್ ಅಧ್ಯಕ್ಷ ಮುನಿಹನುಮಯ್ಯ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಕೋಡಿ ನರಸಿಂಹಮೂರ್ತಿ, ಮಾಜಿ ಗಾಮ ಪಂಚಾಯತಿ ಸದಸ್ಯ ಬಿ ಎಸ್ ಹರೀಶ್, ವೆಂಕಟರಮಣಪ್ಪ, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಕೆಂಪಣ್ಣ, ಕರವೇ ಮುಖಂಡ ರಾಜಘಟ್ಟರವಿ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.
