ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಿಎಂ ರಾಜೀನಾಮೆಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ (Resignation) ಸಲ್ಲಿಸುವ ಮೂಲಕ ಅಧಿಕಾರದಿಂದ ಹೊರಬಂದಿದ್ದಾರೆ.
ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್ಫಾಸ್ಟ್ ಮೀಟಿಂಗ್’ ಬಳಿಕ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದಾರೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದ ಕಾರಣ, ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದಾರೆ.ಅಧಿಕೃತ ಅಂಗೀಕಾರ: ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದ್ದು, ಅವರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮುಂದಿನ ಎರಡು ವರ್ಷಗಳ ಕಾಲ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.
