ದೊಡ್ಡಬಳ್ಳಾಪುರ : ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ವೆಂಕಟೇಶ್ (ಬಂತಿ) ನೂತನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು (ಮೇ 29)ರಂದು ಗಣ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು ತಾಲೂಕಿನ ಹೆಮ್ಮೆಯ ಶಾಸಕರಾದ ಧೀರಜ್ ಮುನಿರಾಜು,ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಆನಂದ್, ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ನಗರಸಭೆಯ ಸರ್ವ ಸದಸ್ಯರ ಸಹಕಾರದೊಂದಿಗೆ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್ ಗೌಡರ ಬೆಂಬಲದೊಂದಿಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಎಲ್ಲರ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡಿದ್ದೇನೆ.

ಪ್ರಸ್ತುತ ಇರುವ 5ತಿಂಗಳ ಅಲ್ಪಾವಧಿಯಲ್ಲಿ ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುವ ಮೂಲಕ ನಗರದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುದು. ನಗರಸಭೆ ಗ್ರೇಡ್ 1ಆಗಿ ಪರಿವರ್ತನೆಗೊಂಡಲ್ಲಿ ಹೆಚ್ಚಿನ ಅನುದಾನ ಪಡೆಯಲು ಸಹಾಯಕವಾಗುತ್ತದೆ ನಗರದ ಅಭಿವೃದ್ಧಿ ಮತ್ತಷ್ಟು ಮಾಡಬಹುದಾಗಿದೆ ಎಂದರು.

ನೂತನ ಉಪಾಧ್ಯಕ್ಷರನ್ನು ಶಾಸಕ ಧೀರಜ್ ಮುನಿರಾಜು, ಬಮುಲ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧ್ಯಕ್ಷ ಪ್ರೇಮ್ ಕುಮಾರ್, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಎಲ್ಲಾ ವಾರ್ಡಿನ ಸದಸ್ಯರು ,ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪ್ರಮುಖರು,ದೊಡ್ಡತುಮಕೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಂಜುನಾಥ್ (LIC) ಸೇರಿದಂತೆ ಹಲವು ಪ್ರಮುಖರು ಸಿಹಿ ನೀಡಿ ಅಭಿನಂದಿಸಿ ಶುಭ ಹಾರೈಸಿದರು.
