ದೊಡ್ಡಬಳ್ಳಾಪುರ : ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರವರು ರಾಜೀನಾಮೆ ನೀಡಿದ್ದು, ನೂತನ ಸಾರಥಿಯಾಗಿ ಡಿ ಕೆ ಶಿವಕುಮಾರ್ ಆಯ್ಕೆಯಾಗುವ ಈ ಸುಸಂದರ್ಭದಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಕೇಂದ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಸಜ್ಜನ ರಾಜಕಾರಣಿಗಳಾದ ಕೆ ಎಚ್ ಮುನಿಯಪ್ಪ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಮತ್ತಷ್ಟು ಪ್ರಾಧ್ಯಾನತೆ ನೀಡಿ ಕಾರ್ಯಕರ್ತಗೆ ಶಕ್ತಿ ತುಂಬಬೇಕು ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ತಿಳಿಸಿದರು.

ತಾಲ್ಲೂಕಿನ ಎಸ್ ಎಸ್ ಘಾಟಿಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಹೈ ಕಮಾಂಡ್ ಆದೇಶದಂತೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ಕಾಂಗ್ರೆಸ್ ವಿಧಾನಸಭಾ ಸದಸ್ಯರ ಜೊತೆಗೂಡಿ ರಾಜ್ಯಪಾಲರಿಗೆ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿದ್ದು ಇದೊಂದು ಮಾದರಿ ಬೆಳವಣಿಗೆಯಾಗಿದೆ. ರಾಜ್ಯದಲ್ಲಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ ಬರುವ ಈ ಸಂದರ್ಭದಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗುತ್ತಿದ್ದು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ನಿರಂತರ ಸೇವೆ ಸಲ್ಲಿಸಿರುವ ಅನುಭವಿ ರಾಜಕಾರಣಿ ಸಮರ್ಥ ನಾಯಕರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆ ಎಚ್ ಮುನಿಯಪ್ಪ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನ ನೀಡಿ ರಾಜ್ಯದ ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕು ಎಂದರು.
ಕೇಂದ್ರ ಸಚಿವರಾಗಿ, ರಾಜ್ಯ ಸಚಿವರಾಗಿ, ಶಾಸಕರಾಗಿ ತಮ್ಮದೇ ಆದ ಛಾಪು ಮೂಡಿಸಿ ಎಲ್ಲೆಡೆ ಸರಳ ಸಜ್ಜನಿಕೆಯ ರಾಜಕಾರಣಿ ಎಂದು ಹೆಸರು ಪಡೆದಿರುವ ದೇವನಹಳ್ಳಿ ಶಾಸಕರಾಗಿರುವ ಕೆಎಚ್ ಮುನಿಯಪ್ಪ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಶ್ರೀ ಕ್ಷೇತ್ರ ಘಾಟಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ ಮಾತನಾಡಿ ಸ್ವಚ್ಛ ರಾಜಕಾರಣದ ಮೂಲಕ ಕೇಂದ್ರ ಹಾಗೂ ರಾಜ್ಯಮಟ್ಟದಲ್ಲಿ ಹಲವು ವರ್ಷಗಳ ನಿರಂತರ ಜನ ಸೇವೆ ಸಲ್ಲಿಸಿಕೊಂಡು ಬಂದಿರುವ ರಾಜ್ಯದ ಪ್ರಭಾವಿ ನಾಯಕರಾದ ಕೆ ಎಚ್ ಮುನಿಯಪ್ಪ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಲು ಅರ್ಹರು ಕಾಂಗ್ರೆಸ್ ಪಕ್ಷವು ಸದಾ ದಲಿತ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪರ ಎಂಬುದನ್ನು ನಾವು ಅರಿತಿದ್ದು. ಕೆ ಎಚ್ ಮುನಿಯಪ್ಪ ಅವರಿಗೆ ಸೂಕ್ತ ಸ್ಥಾನ ನೀಡುವ ಮೂಲಕ ರಾಷ್ಟ್ರ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಜನಪರ ನಿಲುವು ತೋರಬೇಕಿದೆ ಎಂದರು.
ಮುಖಂಡರಾದ ಚಿದಾನಂದ್ ಮಾತನಾಡಿ ತಮಗೆ ನೀಡಿರುವ ಎಲ್ಲಾ ಕ್ಷೇತ್ರಗಳನ್ನು ಸಚಿವರಾಗಿ ಅತ್ಯುತ್ತಮವಾಗಿ ನಿಭಾಯಿಸಿರುವ ಕೆಎಚ್ ಮುನಿಯಪ್ಪ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನ ನೀಡಿ ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಅವಕಾಶ ಕಲ್ಪಿಸಬೇಕು ಶೋಷಿತ ಸಮುದಾಯಗಳ ಪ್ರತಿನಿಧಿ ಎಂದೇ ಪ್ರಸಿದ್ದಿ ಪಡೆದಿರುವ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದರೆ ದಲಿತ ಸಮುದಾಯಗಳಿಗೆ ಶಕ್ತಿ ತುಂಬಿದಂತಾಗುತ್ತದೆ ರಾಷ್ಟ್ರ ಹಾಗು ರಾಜ್ಯ ಕಾಂಗ್ರೆಸ್ ನಾಯಕರು ಈ ಕುರಿತು ಯೋಚಿಸಿ ಸೂಕ್ತ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈವೇಳೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ಕಾಂಗ್ರೆಸ್ ಮುಖಂಡರಾದ ಚಿದಾನಂದ್, ಭೂ ಮಂಜೂರಾತಿ ಸಂದಸ್ಯರಾದ ಶ್ರೀಧರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು, ಕಾರ್ಯದರ್ಶಿ ಎಂ ಮಂಜುನಾಥ್, ಮೆಳೇಕೋಟೆ ಕ್ರಾಸ್ ಮಂಜುನಾಥ್, ಗೊಲ್ಲಹಳ್ಳಿ ಶ್ರೀನಿವಾಸ್, ಹಾಡೋನಹಳ್ಳಿ ಪ್ರಕಾಶ್, ಘಾಟಿ ಪ್ರಾಧಿಕಾರ ಸದಸ್ಯ ರಮೇಶ್, ಲಕ್ಷ್ಮ ನಾಯಕ್ ತೂಬಗೆರೆ, ಮೆಳೇಕೋಟೆ ಅಂಜಿನಪ್ಪ ಸೇರಿದಂತೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು, ಸದಸ್ಯರು,ಕಾರ್ಯಕರ್ತರು ಹಾಜರಿದ್ದರು
