ದೊಡ್ಡಬಳ್ಳಾಪುರ : ತಾಲೂಕಿನ ಪ್ರತಿ ಗ್ರಾಮದ ಪ್ರತಿ ಮನೆಗಳಿಗೆ ತೆರಳುವ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಈ ನಿಟ್ಟಿನಲ್ಲಿ ಗ್ರಾಮ ಪರಿವರ್ತನೆ ಯಾತ್ರೆ ಆರಂಭಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದ ಗ್ರಾಮ ಪರಿವರ್ತನೆ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ತಲುಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಆಡಳಿತ ಅಧಿಕಾರಿ, ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ಎಲ್ಲಾ ಇಲಾಖಾಧಿಕಾರಿಗಳ ಸಹಯೋಗದೊಂದಿಗೆ ಇಂದು ದೊಡ್ಡಬಳ್ಳಾಪುರ ಕ್ಷೇತ್ರದ ವಡ್ಡರಹಳ್ಳಿಯಲ್ಲಿ ಗ್ರಾಮ ಪರಿವರ್ತನೆ ಯಾತ್ರೆಯನ್ನು ಉದ್ಘಾಟಿಸಲಾಗಿದೆ.ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ಸಮಸ್ಯೆಗಳಿವೆ . ಹಾಗಾಗಿ ಈ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಕಾರ್ಯಕ್ರಮದ ಮುಖಾಂತರ ತಾಲೂಕಿನ ಜನತೆಯ ಸಮಸ್ಯೆ ಆಲಿಸಿ , ಪರಿಹಾರ ನೀಡಲು ಪ್ರಯತ್ನ ಮಾಡಲಾಗುವುದು ಸ್ಥಳದಲ್ಲೇ ಅಧಿಕಾರಿಗಳಿಗೆ ಸಮಸ್ಯೆಗಳಿಗೆ ಪರಿಹಾರ ಇರುವಂತೆ ಸೂಚಿಸಲಾಗುವುದು ಅಧಿಕಾರಿಗಳು ನಿರ್ಲಕ್ಷ ತೋರಿದಲ್ಲಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಹಿಂದೂ ಪ್ರಥಮವಾಗಿ ನನ್ನ ಭೂತ್ ವಡ್ರಹಳ್ಳಿ ಗ್ರಾಮದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಪ್ರತಿ ವಾರಕ್ಕೆ ಗರಿಷ್ಠ 3 ದಿನ ಕನಿಷ್ಠ 2 ಈ ರೀತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಧರಿಸಿದ್ದೇವೆ ಎಂದರು.

ಈ ವೇಳೆ ಫಲಾನುಭವಿಗಳಿಗೆ ಇ-ಖಾತೆ, ಆಯುಷ್ಮಾನ್ ಕಾರ್ಡ್ ವಿತರಿಸಿ, ನೀರಿನ ಘಟಕವನ್ನು ಉದ್ಘಾಟಿಸಿ, ₹1 ಕೋಟಿ ಅನುದಾನದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ತಾಲೂಕಿನ ಎಲ್ಲ ಹಳ್ಳಿಗಳಿಗೂ ಭೇಟಿಕೊಟ್ಟು ಜನರೊಂದಿಗೆ ಬೆರೆತು ಅವರ ಸಮಸ್ಯೆಯನ್ನು ಆಲಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂಬ ಸದುದ್ದೇಶದಿಂದ ಈ ಕಾರ್ಯಕ್ರಮ ರೂಪಿಸಿದ್ದು. ಈ ಪರಿವರ್ತನ ಯಾತ್ರೆ ಮೂಲಕ ಗ್ರಾಮದಲ್ಲಿನ ಸೂಕ್ಷ್ಮ ಸಮಸ್ಯೆಗಳ ಕಡೆಗೆ ಗಮನ ಹರಿಸಲಿದ್ದೇವೆ.

ವಡ್ಡರಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ (SCSP) ಮತ್ತು ಪರಿಶಿಷ್ಟ ಪಂಗಡ (TSP) ಅನುದಾನದ ಅಡಿಯಲ್ಲಿ 1ಕೋಟಿ ಅನುದಾನ ನೀಡಿದ್ದು ಸರ್ಕಾರದ ಇತರೆ ಸಾಮಾನ್ಯ ಅನುದಾನದ ಅಡಿಯಲ್ಲಿ ಒಂದು ಕೋಟಿ ಹರಿದಾಡುವ ಮೂಲಕ ಗ್ರಾಮಕ್ಕೆ ಉತ್ತಮ ಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ಗ್ರಾಮಕ್ಕೆ ಸ್ವಾಗತ ಕಮಾನು ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ ಅಲ್ಲದೆ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಮಾಡಿದ್ದಾರೆ ನಾವು ಈಗಾಗಲೇ ಮುಜರಾಯಿ ಇಲಾಖೆಗೆ 5 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಪತ್ರ ರವಾನೆ ಮಾಡಿದ್ದೇವೆ ಎಂದರು
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲಪ್ಪ, ವಿವಿಧ ಇಲಾಖಾ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯ್ತಿ ಸದಸ್ಯರು, ಸ್ಥಳೀಯ ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
