ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ, ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಜೂನ್ 12 ರಂದು ಆಚರಿಸಲಾಗುತ್ತಿದೆ.
ಜೂ.12 ರಂದು ಬೆಳಗ್ಗೆ 9.30ಕ್ಕೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್ ಬಳಿ “ಜಾಗೃತಿ ಜಾಥಾ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿದೆ.
ನಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಶ್ರೀಮತಿ ಕುಂಬ್ಳೆ ಶಾರದಮ್ಮ ಶ್ರೀ ಕುಂಬ್ಳೆ ನಂಜುಂಡಯ್ಯನವರ ಸಭಾಂಗಣದಲ್ಲಿ ಬೆಳಗ್ಗೆ 10: 30ಕ್ಕೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಬಿ.ಎಸ್ ರೇಖಾ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ -2026 ರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸೊಸೈಟಿ ಅಧ್ಯಕ್ಷರಾಗಿರುವ ಡಾ. ಕೆ. ಎನ್. ಅನುರಾಧ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಮುಕುಂದ ಕೆ. ಜಿ., ಹೊಸಕೋಟೆ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್ ಯು., ದೊಡ್ಡಬಳ್ಳಾಪುರ ತಾಲ್ಲೂಕಿನ ಪುಟ್ಟರಾಜು ಡಿ. ಆರ್., ನೆಲಮಂಗಲ ತಾಲ್ಲೂಕಿನ ದಯಾನಂದ ಸಾಗರ್ ಡಿ. ಹೆಚ್., ದೇವನಹಳ್ಳಿ ತಾಲ್ಲೂಕಿನ ರಾಜಶೇಖರಯ್ಯ ಬಿ ಎಂ ಉಪಸ್ಥಿತರಿರಲಿದ್ದಾರೆ.
