ದೊಡ್ಡಬಳ್ಳಾಪುರ : ಜೂನ್ 21 ರ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕಳೆದ ಹಲವು ವರ್ಷಗಳಿಂದ ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ ಈ ಬಾರಿಯ ಕಾರ್ಯಕ್ರಮವನ್ನು ತಾಲ್ಲೂಕಿನ ಸೂರ್ಯ ಪಿ ಯು ಕಾಲೇಜಿನಲ್ಲಿ ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನ ಅಧ್ಯಕ್ಷ ಕೆ ಎಂ ಹನುಮಂತರಾಯಪ್ಪ ತಿಳಿಸಿದರು.
ನಗರದ ಕೆ ಎಂ ಎಚ್ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿ ವರ್ಷವೂ ಅದ್ದೂರಿಯಾಗಿ ವಿಶ್ವ ಯೋಗ ದಿನಾಚರಣೆಯನ್ನು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗುತ್ತಿತ್ತು ಈ ಬಾರಿ ಸಿದ್ಧತೆ ಕೊರತೆಯಿಂದಾಗಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸಮೀಪದ ಸೂರ್ಯ ಪಿ ಯು ಕಾಲೇಜಿನಲ್ಲಿ ಶ್ರೀ ರಾಮ ಆಸ್ಪತ್ರೆಯ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದ್ದು ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದರು.
ಟ್ರಸ್ಟ್ ನ ಉಪಾಧ್ಯಕ್ಷ ತಾ ನಾ ಪ್ರಭುದೇವ್ ಮಾತನಾಡಿ ಕಳೆದ ಹಲವು ವರ್ಷಗಳಿಂದ ತಾಲ್ಲೂಕಿನಲ್ಲಿ ವಿಶೇಷ ದಿನವನ್ನಾಗಿ ವಿಶ್ವ ಯೋಗ ದಿನವನ್ನು ಶ್ರೀ ದಿವ್ಯಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ನಮ್ಮ ಟ್ರಸ್ಟ್ ನಡೆಸಿಕೊಂಡು ಬರುತ್ತಿದ್ದು ಈ ಬಾರಿ ಪೂರ್ವ ಸಿದ್ದತ ಸಭೆಗಳ ಕೊರತೆಯಿಂದಾಗಿ ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಶ್ರೀ ರಾಮ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಲಾಗಿದೆ. ಎಂದಿನಂತೆ ಸಾರ್ವಜನಿಕರು, ಯೋಗಾಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನ ಅಧ್ಯಕ್ಷ ಕೆ ಎಂ ಹನುಮಂತರಾಯಪ್ಪ, ಉಪಾಧ್ಯಕ್ಷ ತಾ ನಾ ಪ್ರಭುದೇವ್, ಕಾರ್ಯದರ್ಶಿ ಅಮರ್ ನಾಥ್ ಸಹಕಾರ್ಯದರ್ಶಿ ವತ್ಸಲಾ, ಖಾಜಾಂಚಿ ಶ್ರೀನಿವಾಸ್, ಲೀಲಾ ಮಹೇಶ್, ಯಶೋದಾ, ಸೀತಾರಾಮ್, ಗಿರೀಶ್ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.
