ದೊಡ್ಡಬಳ್ಳಾಪುರ : ವಿದ್ಯುತ್ ಖಾಸಗೀಕರಣದ ವಿರುದ್ಧ ಮಹಾಲಿಂಗಪುರ ತಾಲ್ಲೂಕು ಹೋರಾಟ ಸಮಿತಿಯ ಅಡಿಯಲ್ಲಿ ರೈತರು, ನೇಕಾರರು, ಕಾರ್ಮಿಕರು ಹೋರಾಟ ನಡೆಸುತ್ತಿದ್ದ ಮುಖಂಡರ ಮೇಲೆ ಹಲ್ಲೆ ಮಾಡಿ ನಿಂದಿಸಿದ್ದಾರೆ ಅವರ ವಿರುದ್ಧ ಈ ಕೂಡಲೇ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ (ರಿ) ಅಧ್ಯಕ್ಷ ವೆಂಕಟೇಶ್ ತಿಳಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಜೂನ್ 17ರಂದು ವಿದ್ಯುತ್ ಖಾಸಗೀಕರಣದ ವಿರುದ್ಧ ಮಹಾಲಿಂಗಪುರ ತಾಲ್ಲೂಕು ಹೋರಾಟ ಸಮಿತಿಯ ಅಡಿಯಲ್ಲಿ ರೈತರು, ನೇಕಾರರು, ಕಾರ್ಮಿಕರು ಸೇರಿ ಹೆಸ್ಕಾಂ ಕಚೇರಿ ಮುಂದೆ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ, ಕೆಲವರು ಕೇಂದ್ರ ಸರ್ಕಾರದ ವಿರುದ್ಧ ಪ್ರಸ್ತಾಪ ಮಾಡಬಾರದು ಎಂದು ಹೇಳಿ ನೇಕಾರ ಮುಖಂಡರಾದ ಶ್ರೀ ಶಿವಲಿಂಗ ಟರ್ಕಿ ಅವರ ಮೇಲೆ ದೈಹಿಕ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ತುಂಬಾ ಕೆಟ್ಟದಾಗಿ ನಡೆದುಕೊಂಡಿರುತ್ತಾರೆ,ಹೋರಾಟಗಾರರ ಮೇಲಿನ ಹಲ್ಲೆಯನ್ನು ನಾವು ಖಂಡಿಸುತ್ತೇವೆ, ತಕ್ಷಣ ಜನಪ್ರತಿನಿದಿಗಳು ಈ ಬಗ್ಗೆ ಕ್ಷಮೆ ಕೇಳಬೇಕು, ಮತ್ತು ನೇಕಾರ ಮುಖಂಡರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದು ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣ ಸಮಿತಿ ಮತ್ತು ದೊಡ್ಡಬಳ್ಳಾಪುರ ಟೆಕ್ಸೆಲ್ ವೀವರ್ಸ್ ಅಸೋಸಿಯೇಷನ್ ಒತ್ತಾಯಿಸುತ್ತದೆ ಎಂದರು.
ದೊಡ್ಡಬಳ್ಳಾಪುರ- ಧರ್ಮವರಂ ಗೆ ರೈಲು ಕಲ್ಪಿಸಿ
ತಾಲ್ಲೂಕಿನ ನೇಕಾರರು ಸೀರೆಗಳನ್ನು ಹೊತ್ತು ಬಸ್ ಗಳ ಮೂಲಕ ಧರ್ಮವರಂ ಗೆ ಸಾಗುವ ಪರಿಸ್ಥಿತಿ ಇದೆ. ಸ್ಥಳೀಯ ಸಂಸದರು ಹಾಗೂ ಶಾಸಕರು ಅನೇಕರಿಗೆ ದೊಡ್ಡಬಳ್ಳಾಪುರ ತಾಲೂಕಿನಿಂದ ಧರ್ಮವರಂಗೆ ರೈಲು ಮಾರ್ಗ ಕಲ್ಪಿಸಿದ್ದೆ ಆದಲ್ಲಿ ನೇಕಾರ ಬಂಧುಗಳಿಗೆ ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಟೆಕ್ಸ್ ಟೈಲ್ ವೀವರ್ಸ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹ ಮೂರ್ತಿ ತಿಳಿಸಿದರು.
ದೂಡ್ಡಬಳ್ಳಾಪುರ ಟೆಕ್ಸ್ ಟೈಲ್ ವೀವರ್ಸ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ನಮ್ಮ ಹೋರಾಟದ ಪಲವಾಗಿ ನೇಕಾರ ಮಳಿಗೆಗೆ ಶಾಸಕರು ಶಾಂಕುಸ್ಥಾಪನೆ ಮಾಡಿದ್ದು ಈ ಕಾಮಗಾರಿ ಶೀಘ್ರಘತಿಯಲ್ಲಿ ಮಾಡಿ ನೇಕಾರರ ಸೇವೆಗೆ ನೀಡಬೇಕು ಟಾಟಾ ಪವರ್ ಎಂಬ ಸಂಸ್ಥೆ ವಿದ್ಯುತ್ ಕ್ಷೇತ್ರವನ್ನು ತನ್ನ ವಶಕ್ಕೆ ಪಡೆಯಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿದೆ. ಸಾರ್ವಜನಿಕ ಸ್ವಾಮ್ಯದ ವಿದ್ಯುತ್ ವಿತರಣಾ ನಿಗಮಗಳ ಹಣಕಾಸು ಸ್ಥಿರತೆ, ಗ್ರಾಹಕರ ಹಿತಾಸಕ್ತಿ ರಕ್ಷಣೆ ಹಾಗೂ ಸಾರ್ವಜನಿಕ ವಿದ್ಯುತ್ ಮೂಲಸೌಕರ್ಯಗಳನ್ನು ರಕ್ಷಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಇಂಧನ ಇಲಾಖೆಯ ಜೊತೆ ಸಮಾಲೋಚಿಸದೇ, ವಿದ್ಯುತ್ ವಿತರಣೆ ಮಾಡುತ್ತಿರುವ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಅಭಿಪ್ರಾಯ ಕೇಳದೇ ಖಾಸಗಿ ವಿದ್ಯುತ್ ವಿತರಣಾ ಕಂಪನಿ ನೇರವಾಗಿ ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿರುವುದು ವಿದ್ಯುತ್ ಕಾಯ್ದೆ 2003 ರ ಗಂಭೀರ ಉಲ್ಲಂಘನೆ ಆಗಿದೆ. ಸಾರ್ವಜನಿಕ ವಿದ್ಯುತ್ ಶಕ್ತಿ ಮೂಲಸೌಕರ್ಯಗಳ ರಕ್ಷಣೆಗೆ, ಕೋಟ್ಯಂತರ ಬಡ ಗ್ರಾಹಕರ ಹಿತರಕ್ಷಣೆಗೆ, ಸಾರ್ವಜನಿಕ ವಿದ್ಯುತ್ ವಿತರಣಾ ನಿಗಮಗಳ ಹಣಕಾಸು ಸ್ಥಿರತೆ ರಕ್ಷಣೆಗೆ ಧಕ್ಕೆ ಉಂಟು ಮಾಡುವುದಲ್ಲದೇ ಗ್ರಾಮೀಣ ವಿದ್ಯುತೀಕರಣ ಹಾಗೂ ಸಾರ್ವತ್ರಿಕ ವಿದ್ಯುತ್ ಬಳಕೆಗೆ ಉತ್ತೇಜನ ದಂತಹ ಮಹತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಉದ್ದೇಶಕ್ಕೆ ವಿರುದ್ಧವಾಗಿದೆ. ಹಾಗಾಗಿ ಟಾಟಾ ಪವರ್ ಕಂಪನಿಯ ಅರ್ಜಿಯನ್ನು ಈ ಕೂಡಲೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ತಿರಸ್ಕರಿಸಬೇಕೆಂದು ಈ ಮೂಲಕ ಒತ್ತಾಯಿಸುತ್ತೇವೆ ಎಂದರು.
ಉಪಾಧ್ಯಕ್ಷ ಆರ್ ಎಸ್ ಶ್ರೀನಿವಾಸ್, ಸಹ ಕಾರ್ಯದರ್ಶಿ ಎಂ ಮುನಿರಾಜು, ಮುಖಂಡರಾದ ರಾಮು, ದೂಡ್ಡಬಳ್ಳಾಪುರ ಟೆಕ್ಸ್ ಟೈಲ್ ವೀವರ್ಸ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರಾದ ಬಾಬು, ಮಂಜುನಾಥ್, ಚೌಢಯ್ಯ ಸೇರಿದಂತೆ ಹಲವಾರು ಹಾಜರಿದ್ದರು.
