ದೊಡ್ಡಬಳ್ಳಾಪುರ : ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೋಲಿಸ್ ಠಾಣೆ ಸರ್ಕಲ್ ಇನ್ಪೆಕ್ಟರ್ ಡಾ ಎಂ ಬಿ ನವೀನ್ ಕುಮಾರ್ ಮಾಹಿತಿ ನೀಡಿದರು.
ನಗರದ ಲಾವಣ್ಯ ಕಾಲೇಜಿನಲ್ಲಿ ಗ್ರಾಮಾಂತರ ಪೋಲಿಸ್ ಠಾಣೆ ಮತ್ತು ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ ದಲ್ಲಿ ಭಾಗವಹಿಸಿ ಮಾತನಾಡಿದರು ವಿದ್ಯಾರ್ಥಿಗಳಲ್ಲಿ ಅದರಲ್ಲೂ ಯುವಕ ಯುವತಿಯರಲ್ಲಿ ಮಾದಕ ವಸ್ತುಗಳ ಸೇವನೆ ಇತ್ತೀಚೆಗೆ ತುಂಬಾ ಹೆಚ್ಚಾಗುತ್ತಿರುವುದು ಆಘಾತಕಾರಿ ವಿಷಯ ಯುವಕರು ಮೋಜು ಮಸ್ತಿಯ ಆಕರ್ಷಣೆಗೆ ಒಳಗಾಗಿ ತಮ್ಮ ಜೀವನವನ್ನೆ ಹಾಳುಮಾಡುಕೊಳ್ಳುತ್ತಿದ್ದಾರೆ ಎಂದರು.
ಯುವ ಸಮುದಾಯ ಮಾದಕ ವಸ್ತುಗಳ ಸೇವನೆಯಿಂದ ದೖಹಿಕವಾಗಿ ಮಾನಸಿಕವಾಗಿ ಕುಗ್ಗುತ್ತಾರೆ ಈ ವ್ಯಸನದಿಂದ ಯುವಕರು ಹೊರಬಂದರೆ ದೇಶ ಸಮೃದ್ಧವಾಗುತ್ತದೆ ಜೊತೆಗೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಅದುದರಿಂದ ಯುವ ಜನಾಂಗ, ವಿದ್ಯಾರ್ಥಿಗಳು ಮಾದಕವಸ್ತುಗಳ ಸೇವನೆಯಿಂದ ದೂರಯಿರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎಂ ಸಿ ಮಂಜುನಾಥ್ ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿಭಾಗಗಳ ಉಪನ್ಯಾಸಕರು, ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಜರಿದ್ದರು.
