ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊನಘಟ್ಟ ಗ್ರಾಮದ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ವಿಜಯಮ್ಮ ಮತ್ತು ಉಪಾಧ್ಯಕ್ಷರಾಗಿ ರವಿ ಆಯ್ಕೆಯಾಗಿದ್ದಾರೆ.
ಕೋನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ (Milk Producers Co-operative Society)ಕ್ಕೆ ಜೂನ್ 29 ರಂದು ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು, 12 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ ನೂತನ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿ ವಿಜಯಮ್ಮ ಮತ್ತು ಉಪಾಧ್ಯಕ್ಷರಾಗಿ ರವಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾದ ವಿಜಯಮ್ಮ ಮಾತನಾಡಿ ರೈತರ ಸಮಸ್ಯೆ ಗಳಿಗೆ ತ್ವರಿತವಾಗಿ ಸ್ಪಂದಿಸಿ ಸ್ಥಳೀಯವಾಗಿ ಹಾಲು ಉತ್ಪಾದಕರಿಗೆ ಸರ್ಕಾರಿ ಸವಲತ್ತು ಒದಗಿವುದು ನಮ್ಮ ಮುಖ್ಯ ಉದ್ದೇಶವಾಗಿದ್ದು,ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಹಾಲು ಉತ್ಪಾದನೆಗೆ ಒತ್ತು ನೀಡುವುದು ನಮ್ಮ ಸಂಕಲ್ಪವಾಗಿದೆ. ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ನಮ್ಮ ಎಂ ಪಿ ಸಿ ಎಸ್ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ನನ್ನ ಈ ಗೆಲುವಿಗೆ ಶ್ರಮಿಸಿದ ಎಲ್ಲಾ ಹಿರಿಯರಿಗೂ ಸ್ಥಳೀಯ ಮುಖಾಂಡಾರಿಗೂ,ಹಿತೈಷಿಗಳಿಗೂ, ಸರ್ವ ಸದಸ್ಯರಿಗೂ ನಾನು ಅಭಾರಿಯಾಗಿದ್ದೇನೆ ಎಂದರು.
ನೂತನ ಪದಾಧಿಕಾರಿಗಳಿಗೆ ಎಂ ಪಿ ಸಿ ಎಸ್ ಮಾಜಿ ಅಧ್ಯಕ್ಷರುಗಳು, ಮಾಜಿ ಅಧ್ಯಕ್ಷರು ನಿರ್ದೇಶಕರ ಆನಂದ್ ಟಿಎಪಿಎಂಸಿ, ಸ್ಥಳೀಯ ಮುಖಂಡರಾದ ರಂಗಸಮಪ್ಪ, ರಾಮಾಂಜಿನಪ್ಪ, ನಾರಾಯಣ ಸ್ವಾಮಿ,ರಾಮಣ್ಣ, ಮುನೇಗೌಡ, ಮಂಜುನಾಥ್, ಮಾಜಿ ಗ್ರಾಮ ಪಂಚಾಯತಿಯ ಸದಸ್ಯ ಮಂಜುನಾಥ್ , ಶುಭ ಹಾರೈಸಿದ್ದಾರೆ.
