ಶಾಲೆಯೊಂದರ ತರಗತಿ ಕೋಣೆಯಲ್ಲೇ ಸಹ ಶಿಕ್ಷಕ ಹಾಗೂ ಸಹ ಶಿಕ್ಷಕಿಯೊಬ್ಬರು ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳು ತರಗತಿಯಿಂದ ಹೊರಗೆ ಹೋದ ತಕ್ಷಣ ಇಬ್ಬರು ಶಿಕ್ಷಕರು ಕ್ಲಾಸ್ರೂಮ್ನಲ್ಲೇ ಪರಸ್ಪರ ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ವೈರಲ್ ಆಗುತ್ತಿದೆ.
ಈ ಘಟನೆಯು ಕನ್ನೌಜ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎನ್ನಲಾಗಿದ್ದು . ಶಾಲೆಯಲ್ಲಿ ಮಕ್ಕಳು ಹೊರಗೆ ಹೋದ ತಕ್ಷಣ ಇಬ್ಬರೂ ಶಿಕ್ಷಕರು ಕಿಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸಲು ಶುರುಮಾಡಿದ್ದಾರೆ. ಈ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಆದರ್ಶಪ್ರಾಯರಾಗಿರಬೇಕಿದ್ದ ಶಿಕ್ಷಕರೇ ಈ ರೀತಿಯ ವರ್ತನೆ ಮಾಡಿರುವುದು ಶಿಕ್ಷಣ ವ್ಯವಸ್ಥೆ ಮತ್ತು ಗುರು-ಶಿಷ್ಯ ಪರಂಪರೆಗೆ ಕಪ್ಪು ಚುಕ್ಕೆಯಾಗಿದೆ ಎಂದು ಸ್ಥಳೀಯ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಈ ಇಬ್ಬರೂ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಬೇಸಿಕ್ ಶಿಕ್ಷಣಾಧಿಕಾರಿ (BSA) ಸಂದೀಪ್ ಕುಮಾರ್ ಅವರು, ಸಂಬಂಧಪಟ್ಟ ಬ್ಲಾಕ್ ಶಿಕ್ಷಣಾಧಿಕಾರಿಯಿಂದ (BEO) ಸಂಪೂರ್ಣ ವರದಿಯನ್ನು ಕೇಳಿದ್ದಾರೆ. ವರದಿ ಬಂದ ತಕ್ಷಣವೇ ಇಬ್ಬರೂ ಶಿಕ್ಷಕರನ್ನು ಅಮಾನತು (Suspension) ಮಾಡಲಾಗುವುದು ಮತ್ತು ಇಲಾಖೆಯ ಉನ್ನತ ಅಧಿಕಾರಿಗಳಿಗೂ ವರದಿ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.
