ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಹೋಬಳಿಯ ಗೂಳ್ಯನಂದಿಗುಂದ ಗ್ರಾಮದ ಸರ್ವೆ ನಂಬರ್ ನಂದ 28ರ 8.14 ಎಕರೆ ಹಾಗೂ ಸರ್ವೆ ನಂಬರ್ 30ರ 4.30 ಎಕರೆ ಜಾಗವನ್ನ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಜಾಗವನ್ನು ಕಬಳಿಕೆ ಮಾಡಲಾಗಿದೆ, ಈ ಕೃತ್ಯದಲ್ಲಿ ಕೆಲ ಸರ್ಕಾರಿ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆಯ ರಾಜ್ಯಾಧ್ಯಕ್ಷರಾದ ಯು.ಮುನಿರಾಜು ಆರೋಪಿಸಿದರು.
ನಕಲಿ ದಾಖಲೆಗಳನ್ನ ಸೃಷ್ಠಿಸಿ ಸರ್ಕಾರಿ ಜಾಗವನ್ನ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ, ಕರ್ನಾಟಕ ದಲಿತ ಸಂರಕ್ಷಣಾ ಸೇನೆ ಹಾಗೂ ಜೈಭೀಮ್ ಅಂಬೇಡ್ಕರ್ ಸಮಿತಿ ವತಿಯಿಂದ ತಾಲ್ಲೂಕು ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು 1952-53ರಲ್ಲಿ ಹರಾಜಿನಲ್ಲಿ ಜಮೀನು ಖರೀದಿ ಮಾಡಿರುವುದಾಗಿ ಸರ್ಕಾರಿ ಅಧಿಕಾರಿಗಳು ತಿಳಿಸುತ್ತಾರೆ , ಹರಾಜು ಪ್ರಕ್ರಿಯ ನಡೆದಿದ್ದರೆ…?? , ಹರಾಜು ಪ್ರಕ್ರಿಯೆಗೆ ಸಂಬಂದಿಸಿದ ಫೈಲ್ ಮತ್ತು ಮೂಲ ದಾಖಲೆಗಳನ್ನು ಕೊಡಲು ಯಾಕೆ ಮೀನಾಮೇಷ ಎಣಿಸುತ್ತಿದ್ದಾರೆ… ಈ ಸಂಬಂಧ ದಾಖಲಾತಿಗಳನ್ನು ನೀಡುವಂತೆ ಕಳೆದ ಜನವರಿ ತಿಂಗಳಲ್ಲಿ ಮನವಿ ಸಲ್ಲಿಸಿ ಕೇಳಿಕೊಂಡಿದ್ದೇವು ಆದರೆ ಇಲ್ಲಿಯವರೆಗೂ ಯಾವುದೇ ಮಾಹಿತಿ ಕೊಟ್ಟಿಲ್ಲ ಎಂದು ಆರೋಪಿಸಿದರು.
ಅಲ್ಲದೆ ಕಳೆದ ಫೆಬ್ರವರಿ ತಿಂಗಳಿನಲ್ಲಿ ಸರ್ಕಾರಿ ದಾಖಲೆಗಳನ್ನ ತಿದ್ದಿರುವ ಆರೋಪ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು, ಇಲ್ಲಿಯವರೆಗೂ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿಲ್ಲ, ಪ್ರಕರಣ ದಾಖಲಾಗುವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದರು.
ದೊಡ್ಡಬಳ್ಳಾಪುರ ತಹಶೀಲ್ದಾರ್ ಕಛೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಸರ್ಕಾರಿ ಜಮೀನು ಕಬಳಿಕೆಯಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಅಕ್ರೋಶ ಹೊರ ಹಾಕಿದರು.
ಪ್ರತಿಭಟನೆಯಲ್ಲಿ ಪ್ರಬುದ್ಧ ಕರ್ನಾಟಕ ಭೀಮ ಸೇನೆಯ ಗೌರವಾಧ್ಯಕ್ಷ ವಿ. ನಾಗರಾಜು, ಪ್ರಧಾನ ಕಾರ್ಯದರ್ಶಿ ಎಂ.ಚನ್ನಿಗರಾಯಪ್ಪ, ಕಾರ್ಯದರ್ಶಿ ಜಿ.ವಿ.ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ. ಕರ್ನಾಟಕ ದಲಿತ ಸಂರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ರಾವಣ್ , ಪ್ರಧಾನ ಕಾರ್ಯದರ್ಶಿ ಮುರಳಿ, ಕಾರ್ಯದರ್ಶಿ ಮೋಹನ್, ಜಂಟಿ ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾಧ್ಯಕ್ಷ ರಾಮು, ಜೈಭೀಮ್ ಅಂಬೇಡ್ಕರ್ ಸಮಿತಿಯ ರಾಜ್ಯಧ್ಯಕ್ಷ ಕಿರಣ್ ಕುಮಾರ್ ಸೇರಿದಂತೆ ಹಲವು ದಲಿತ ಮುಖಂಡರು, ಪ್ರಗತಿಪರ ಚಿಂತಕರು ಹಾಜರಿದ್ದರು.
