2026-27ನೇ ಸಾಲಿನ ಸಾಮಾನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯಪರಿಕರ/ ವೇಷಭೂಷಣ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2026-27ನೇ ಸಾಲಿನ ಸಾಮಾನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು Sevasindhu.karnataka.gov.in ಮೂಲಕ ಆಗಸ್ಟ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 080-24410574/ 08022213530/ 998683703708/ 080-22241325 ಅನ್ನು ಸಂಪರ್ಕಿಸಬಹುದು ಅಥವಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾಸಿಂಧು ಇವರನ್ನು ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
