ದೊಡ್ಡಬಳ್ಳಾಪುರ : ಪ್ರಸ್ತುತ ಸಮಯದಲ್ಲಿ ಆರೋಗ್ಯವೇ ಸಂಪತ್ತು ಎಂದರೆ ತಪ್ಪಾಗಲಾರದು. ನಾವು ಸದೃಢರಾಗಿದ್ದರೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ ಈ ನಿಟ್ಟಿನಲ್ಲಿ ವಯೋವೃದ್ಧರಿಗೆ, ಮಕ್ಕಳಿಗೆ, ರೈತರಿಗೆ, ಮಹಿಳೆಯರಿಗೆ ಅನುಕೂಲವಾಗುವ ರೀತಿಯಲ್ಲಿ ಗ್ರಾಮಗಳಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಮಾಡಲಾಗುತ್ತದೆ. ಜನತೆ ಈ ಶಿಬಿರಗಳಲ್ಲಿ ದೊರೆಯುವ ಚಿಕಿತ್ಸೆಗಳ ಪ್ರಯೋಜನ ಪಡೆದುಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಕೈಜೋಡಿಸಬೇಕು ಎಂದು ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮಾರಬ್ಬ ಮನವಿ ಮಾಡಿದರು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ದೊಡ್ಡಬಳ್ಳಾಪುರ ತಾಲೂಕು) ಹಾಗೂ ದೃಷ್ಟಿ ಕಣ್ಣಿನ ಆಸ್ಪತ್ರೆ ಇವರ ವತಿಯಿಂದ ಅರಳು ಮಲ್ಲಿಗೆ ವಲಯದ ಹೊನ್ನಘಟ್ಟ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಲಾಗಿತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಸಮುದಾಯದ ಅಭಿವೃದ್ಧಿ ಗೆ ಶ್ರಮಿಸುತ್ತಿದೆ
ಗ್ರಾಮ ಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸುವುದು, ಬೀದಿನಾಟಕ ಪ್ರದರ್ಶನ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಶಿಬಿರದಲ್ಲಿ ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ಮಾಡಿ ಉಚಿತವಾಗಿ ಕನ್ನಡಕ ವಿತರಣೆ ಮಾಡಲಾಯಿತು

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ದಿನೇಶ್ ,ದೃಷ್ಟಿ ಆಸ್ಪತ್ರೆಯ ಸಿಬ್ಬಂದಿ ಶಿವಕುಮಾರ್, ವೆಂಕಟೇಶ್, ತಾಲೂಕು ಕೃಷಿ ಮೇಲ್ವಿಚಾರಕರಾದ ಲೋಹಿತ್, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿ ಪುರುಷೋತ್ತಮ,ಗ್ರಾಮದ ಹಿರಿಯರಾದ ಸೋಮಶೇಖರ್ ಗಂಗಾಧರಯ್ಯ, ಕೇಶವಮೂರ್ತಿ,ನಟರಾಜ್ ಸೇವಾಪ್ರತಿನಿದಿಗಳಾದ ವಿಶಾಲಾಕ್ಷಿ,ಮಂಗಳ ಸೇರಿದಂತೆ ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
