ಭಾರತ ಸ್ವಾತಂತ್ರ್ಯ ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನ, ಏಕತೆ ಮತ್ತು ಸಾರ್ವಭೌಮತೆಯ ಅಚಲ ಪ್ರತೀಕವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.
ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಬದ್ಧತೆ, ಅಚಲವಾದ ದೇಶಪ್ರೇಮ, ತ್ಯಾಗ ಮತ್ತು ಸಮರ್ಪಣಾ ಮನೋಭಾವದಿಂದ ಎಂದಿಗೂ ಸ್ಪೂರ್ತಿದಾಯಕವಾಗಿದೆ. ಭಾರತ ಸ್ವಾತಂತ್ರ್ಯ ಚಳುವಳಿ ಜಗತ್ತಿನ ಬಹುದೊಡ್ಡ ಜನಾಂದೋಲನ ಎಂದು ಪ್ರಖ್ಯಾತವಾಗಿದೆ ಎಂದರು.
ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಸ್ವಾತಂತ್ರ್ಯದಿಂದ ಭಾರತ ಸಾರ್ವಭೌಮ ರಾಷ್ಟ್ರವಾಗಿ ಉದಯವಾಯಿತು. ದೇಶದಲ್ಲಿ ಪ್ರಜಾಪ್ರಭುತ್ವ, ಸಮಾನತೆ, ನ್ಯಾಯ ಮತ್ತು ಸಂವಿಧಾನಿಕ ಮೌಲ್ಯಗಳಿಗೆ ಅಡಿಪಾಯ ಹಾಕಿತು. ಸ್ವಾತಂತ್ರ್ಯ ನಂತರ ಭಾರತ ಆಗಾಧವಾದ ಸಾಧನೆ ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ನಾಗರಾಜ್ ಸಂಕಣ್ಣ, ನಾಗದಳ ನಟರಾಜ್, ದರ್ಗಾಜೋಗಿಹಳ್ಳಿ ಮಲ್ಲೇಶ್, ನಾಗರತ್ನಮ್ಮ, ಬಾಶೆಟ್ಟಿಹಳ್ಳಿ ಮಂಜುನಾಥ್, ಷಫೀರ್, ವೆಂಕಟರಾಜು, ಮುನಿರಾಜು, ರಂಗಸ್ವಾಮಯ್ಯ, ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.
