
ದೊಡ್ಡಬಳ್ಳಾಪುರ : ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಿ.ಎಸ್.ಚಂದ್ರಶೇಖರ್ ರವರ ನೇತೃತ್ವದಲ್ಲಿ ತಾಲ್ಲೂಕಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಾಗೂ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದು ತಾಲ್ಲೂಕಿಗೆ ಕೀರ್ತಿ ತಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಗುತ್ತಿದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ತಿಳಿಸಿದರು.
ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಆಯೋಜನೆ ಮಾಡಲಾಗಿದ್ದ 2025-26ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಉತ್ತಮವಾದಂತಹ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಲಿ ಎನ್ನುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಗಿದೆ, ವಿದ್ಯಾರ್ಥಿಗಳು ಉತ್ತಮವಾದ ಜ್ಞಾನ ಸಂಪಾದನೆಗೆ ಉತ್ತಮವಾದಂತಹ ಪುಸ್ತಕ ಮತ್ತು ಪತ್ರಿಕೆಗಳನ್ನು ಓದುವಂತಹ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಆಗ ಮಾತ್ರ ವಿದ್ಯಾರ್ಥಿಗಳಿಗೆ ಓದುವಂತಹ ಜ್ಞಾನ ಮತ್ತು ಸಮಾಜದ ಅಂಕು ಡೊಂಕುಗಳ ಬಗ್ಗೆ ಅರಿವು ಪಡೆಯಲು ಸಾಧ್ಯವಾಗುತ್ತದೆ ಎಂದರು.
ಮಕ್ಕಳಲ್ಲಿ ಭಾಷಾಭಿಮಾನ ಬೆಳೆಯಬೇಕು , ಕನ್ನಡ ಭಾಷೆ ಸಮೃದ್ಧವಾಗಿದೆ ಅದನ್ನು ಮಕ್ಕಳಿಗೆ ತಲುಪಿಸುವ ಕೆಲಸ ನಮ್ಮ ಸಂಘಟನೆ ಮಾಡುತ್ತದೆ, ಇಂದಿನ ಕಾರ್ಯಕ್ರಮದಲ್ಲಿ 120ಕ್ಕೂ ಅಧಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದೆ.ವಿಶೇಷವಾಗಿ ಕನ್ನಡ ಭಾಷೆಯಲ್ಲಿ ಹೆಚ್ಚಿನ ಅಂಕ ಪಡೆದಿರುವ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ ಇದರಿಂದ ಮತ್ತಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಪಡೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ತಾಲ್ಲೂಕಿನ ಜನಪ್ರೀಯ ಜಾತ್ಯಾತೀತನಾಯಕ ದಿವಂಗತಆರ್.ಜಿ.ವೆಂಕಟಾಚಲಯ್ಯ ನವರ ಭಾವಚಿತ್ರಕ್ಕೆ ಗಣ್ಯರು ಅತಿಥಿಗಳು ಸಂಘಟನಾ ಪ್ರಮುಖರು ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕನ್ನಡದ ಕಟ್ಟಾಳುಗಳಾದ ಟಿ. ಕೇಶವ ಮತ್ತು ಮಲ್ಲೇಶ ರವರಿಗೆ ಕನ್ನಡ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು .
ನಮ್ಮ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸದಾ ಸಮಾಜಮುಖಿ ಮಾದರಿ ಕಾರ್ಯಕ್ರಮ ಮಾಡುತ್ತಾ ಬಂದಿದೆ ಅಲ್ಲದೆ ಸರ್ಕಾರಿ ಆಸ್ತಿ ಉಳಿಸುವ ನಿಟ್ಟಿನಲ್ಲಿ ಹಲವಾರು ಹೋರಾಟಗಳನ್ನು ಮಾಡಿದ್ದೇವೆ ಮುಂದೆಯೂ ನಮ್ಮ ಹೋರಾಟ ನಿಲ್ಲುವುದಿಲ್ಲ ರಾಜ್ಯಾಧ್ಯಕ್ಷರಾದ ಬಿಎಸ್ ಚಂದ್ರಶೇಖರ್ ರವರ ಮಾರ್ಗದರ್ಶನದಲ್ಲಿ ನಾಡು,ನುಡಿ, ಜಲ ವಿಚಾರವಾಗಿ ಕನ್ನಡಿಗರ ಧ್ವನಿಯಾಗಿ ನಮ್ಮ ಸಂಘಟನೆ ಶ್ರಮಿಸಲಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ರಾಜ್ಯ ಖಜಾಂಚಿ ಚೇತನ್ ಗೌಡ, ರಾಜ್ಯ ಮುಖಂಡ ಪಿ ವಾಸು, ನರೇಂದ್ರ, ಜಿಲ್ಲಾ ಕಾರ್ಯಧ್ಯಕ್ಷ ಪ್ರದೀಪ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ತಾಯೇಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಅಲ್ತಾಫ್ ಪಾಷಾ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ, ತಾಲೂಕು ಅಧ್ಯಕ್ಷ ವಿನಯ ಆರಾಧ್ಯ, ತಾಲೂಕು ಕಾರ್ಯದರ್ಶಿ ಉದಯ್ ಕುಮಾರ್, ತಾಲೂಕು ಉಪಾಧ್ಯಕ್ಷ ಅಂಬರೀಶ್, ಸಂಘಟನಾ ಕಾರ್ಯದರ್ಶಿ ಶಿವಾನಂದ್, ಸಾಸಲು ಹೋಬಳಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ತಾಲೂಕು ಮುಖಂಡ ಶಿವ ಶಂಕ್ರಪ್ಪ, ಭದ್ರೇಶ್, ಮಹಿಳಾ ಘಟಕದ ಕಾರ್ಯಕರ್ತರದ ಕಮಲಮ್ಮ, ಗಿರಿಜಮ್ಮ,ನಿತ್ಯ ದಾಸೋಹದ ಕಾಯಕ ಸಮಿತಿಯ ಅಧ್ಯಕ್ಷರಾದ ಆರ್ ಪುಷ್ಪಾ ರಮೇಶ್, ಕಾರ್ಯದರ್ಶಿಗಳಾದ ಶಕುಂತಲಾ ಚಂದ್ರಶೇಖರ್, ಖಜಾಂಚಿ ಕಾರ್ಯದರ್ಶಿ ಕಮಲಾಕ್ಷಿ, ಸದಸ್ಯರಾದ ಲತಾ ಶ್ರೀಶೈಲ್ , ಸುಧಾ ಗಂಗಾಧರ್ ಸೇರಿದಂತೆ ಸಂಘಟನೆಯ ಎಲ್ಲ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.




