
ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿ ಶೀಟರ್ ಸೋಮಶೇಖರ (ಡೆಡ್ಲಿ ಸೋಮ) ಎಂಬುವವರನ್ನು ದಸ್ತಗಿರಿ ಮಾಡಿ ಆಕ್ರಮವಾಗಿ ಮಾರಾಟ ಮಾಡುತ್ತಿದ್ದ 2 ಕೆ.ಜಿ. 064 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಸೆಪ್ಟೆಂಬರ್ 11 ರಂದು ಸಂಜೆ 4-20 ಗಂಟೆಯಲ್ಲಿ ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಸುಮಾರು ಮೂರು ವರ್ಷಗಳಿಂದ ತನ್ನ ಇರುವಿಕೆ ಬಗ್ಗೆ ಯಾವುದೇ ಸುಳಿವು ನೀಡದೆ ತಲೆಮರೆಸಿಕೊಂಡಿದ್ದು, ಸದರಿ ಆಸಾಮಿಯ ಪತ್ತೆಗಾಗಿ ಬೆಂಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಎಂ.ವಿ.ಚಂದ್ರಕಾಂತ್, ಐ.ಪಿ.ಎಸ್ ಹಾಗೂ ಅಪರ ಪೊಲಿಸ್ ಅಧೀಕ್ಷಕರವರುಗಳಾದ ಡಾ. ವೆಂಕಟೇಶ್ ಪ್ರಸನ್ನ, ಶ್ರೀ ಲಕ್ಷ್ಮಿನಾರಾಯಣ್ ರವರ ಸೂಚನೆಯಂತೆ ದೊಡ್ಡಬಳ್ಳಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರವರಾದ ಶ್ರೀ ಪಾಂಡುರಂಗ.ಎಸ್. ಕೆ.ಎಸ್.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಮುತ್ತುರಾಜು.ಹೆಚ್, ಅಪರಾಧ ವಿಭಾಗದ ಸಿಬ್ಬಂದಿಯವರಾದ ಶ್ರೀ ಪಾಂಡುರಂಗ ಮತ್ತು ಶ್ರೀ ಶಿವಾನಂದ ಮತ್ತು ಶ್ರೀ ರೂಪೇಶ್ ರವರು ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಅಸಾಮಿ ಸೋಮಶೇಖರ ( ಡೆಡ್ಲಿ ಸೋಮ)( 30 ವರ್ಷ) ನನ್ನು ಬಾರಂದೂರು ಗಲ್ಲಿ, ಆನೇಕಲ್ ಟೌನ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಹಾಗೂ ಸದರಿ ವ್ಯಕ್ತಿಯು ದೊಡ್ಡಬಳ್ಳಾಪುರದಲ್ಲಿ ಮಾರಾಟ ಮಾಡಲು ತಂದಿದ್ದ ಸುಮಾರು 1 ಲಕ್ಷ ರೂಪಾಯಿ ಮೌಲ್ಯದ 2 ಕೆ.ಜಿ. 064 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಧಾಳಿಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯವರನ್ನು ಕೇಂದ್ರ ವಲಯದ ಮಾನ್ಯ ಪೊಲೀಸ್ ಮಹಾ ನಿರೀಕ್ಷಕರು ಶ್ಲಾಘಿಸಿದ್ದು, ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ




