
ದೊಡ್ಡಬಳ್ಳಾಪುರ (HKಸುದ್ದಿ ) : ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬದ ಅಂಗವಾಗಿ ಉಚಿತ ದಾಸೋಹದ ವ್ಯವಸ್ಥೆಯನ್ನು ಕೈಗೊಳ್ಳುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಉಚಿತ ಅನ್ನದಾಸೋಹ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು ನಂತರ ಮಾತನಾಡಿದ ಅವರು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಉತ್ತಮವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ ಅವರ ಸಮಾಜಮುಖಿ ಹೋರಾಟ ಸದಾ ಮುಂದುವರೆಯಲಿ ಹಾಗೂ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ ಎಸ್ ಚಂದ್ರಶೇಖರ್ ರವರ ನೇತೃತ್ವದ ದಾಸೋಹ ಪ್ರತಿದಿನ ರಿಯಾಯಿತಿ ದರದಲ್ಲಿ ಹಸಿದವರಿಗೆ ಹೊಟ್ಟೆ ತುಂಬಾ ಊಟವನ್ನು ಕಾರ್ಯ ಮಾಡುತ್ತಿದೆ ಅಷ್ಟೇ ಅಲ್ಲದೆ ಊರಿನ ಅಭಿವೃದ್ಧಿ ಕೆಲಸಗಳನ್ನು ಸಹ ಮಾಡುತ್ತಿದ್ದಾರೆ ಅವರ ತಂಡಕ್ಕೆ ಶುಭವಾಗಲಿ…
ತಾಲೂಕು ಕಚೇರಿಯಿಂದ ಬಸವ ಭವನದವರಿಗೂ ಸಿಸಿ ರಸ್ತೆಯನ್ನು ಮಾಡಲು ಚಂದ್ರಶೇಖರ್ ಅವರ ಹೋರಾಟ ಸಹ ಒಂದು ಕಾರಣ ಎಂದರೆ ತಪ್ಪಾಗಲಾರದು ಮುಂದಿನ ದಿನಗಳಲ್ಲಿ ಈ ಸಂಘಟನೆ ಇನ್ನೂ ಉತ್ತಮವಾದ ಕೆಲಸಗಳನ್ನು ಮಾಡಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ ಮಾತನಾಡಿ ಪ್ರತಿದಿನ ನಮ್ಮ ರಾಜ್ಯಧ್ಯಕ್ಷ ರಾದ ಬಿ ಎಸ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ ರಿಯಾಯಿತಿ ದರದಲ್ಲಿ ಸಾರ್ವಜನಿಕರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಆಹಾರ ಒದಗಿಸಲಾಗುತ್ತದೆ ಇಂದು ನಮ್ಮ ದೇಶದ ಹೆಮ್ಮೆಯ ಪ್ರಧಾನಿ ಜನಪ್ರಿಯ ನಾಯಕರಾದ ನರೇಂದ್ರ ಮೋದಿಜೀಯವರ 76 ನೇ ಹುಟ್ಟು ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದೆ ಇಂತಹ ಅದ್ಭುತ ಕಾರ್ಯಕ್ರಮವನ್ನು ತಾಲೂಕಿನ ಶಾಸಕರಾದ ಧೀರಜ್ ಮುನಿರಾಜು ಅವರು ಚಾಲನೆ ನೀಡಿರುವುದು ಸಂತಸ ತಂದಿದೆ. ದೇಶದ ಸಾಮಾನ್ಯ ಪ್ರಜೆಯಾಗಿ ಪ್ರಧಾನಿ ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬವನ್ನು ಈ ರೀತಿ ಆಚರಿಸುತ್ತಿರುವುದು ತೃಪ್ತಿಕರ ಭಾವನೆ ಮೂಡಿಸಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾಯೇಗೌಡ ಮಾತನಾಡಿ ಸೆಪ್ಟೆಂಬರ್ 17 ದೇಶಾದ್ಯಂತ ಹಬ್ಬದ ರೀತಿ ಆಚರಿಸುವ ದಿನವಾಗಿದೆ ಕಾರಣ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬ ಈ ದಿನವನ್ನು ನಮ್ಮ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ ನೇತೃತ್ವದಲ್ಲಿ ಸುಮಾರು 350ಕ್ಕೂ ಅಧಿಕ ಜನರಿಗೆ ಉಚಿತ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದೆ ಈ ಮೂಲಕ ದೇಶದ ಪ್ರಧಾನಿಗೆ ನಮ್ಮ ಸಂಘಟನೆ ವತಿಯಿಂದ ಗೌರವ ಸಮರ್ಪಣೆ ಮಾಡುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯಧ್ಯಕ್ಷ ರಾದ ಬಿ ಎಸ್ ಚಂದ್ರಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾಯೇಗೌಡ,ತಾಲೂಕು ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ಮುಖಂಡರಾದ ಪ್ರಶಾಂತ್, ಪ್ರದೀಪ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




