
ದೊಡ್ಡಬಳ್ಳಾಪುರ : ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜೀ ಯವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ರಾಜ್ಯ ವಿ ಕರವೇ ಸಂಸ್ಥಾಪಕ ಅಧ್ಯಕ್ಷ ಎ. ನಂಜಪ್ಪ ತಿಳಿಸಿದರು.
ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು ಮಾತನಾಡಿದ ಅವರು ಅಹಿಂಸೆಯೇ ಗಾಂಧಿಜೀಯವರ ಅಸ್ತ್ರವಾಗಿತ್ತು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸಲು ಅವರ ಜನ್ಮದಿನವಾದ ಅಕ್ಟೋಬರ್ 2 ಅನ್ನು ರಾಷ್ಟ್ರೀಯ ರಜಾದಿನವೆಂದು ಗುರುತಿಸಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ . ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಯವರು ಮಾದರಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿ ಇಂದಿಗೂ ದೇಶದ ಪ್ರಜೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಅವರ ಜೀವನವೇ ಆದರ್ಶ ಅವರು ನೀಡಿದ ಅವರ ಜೈ ಜವಾನ್ ಜೈ ಕಿಸಾನ್ ಘೋಷಣೆ ಸ್ಮರಣೀಯವಾದದ್ದು ಎಂದರು.
ತಾಲ್ಲೂಕು ಉಪಾಧ್ಯಕ್ಷ ಜೆ. ಶಿವಕುಮಾರ್ ಮಾತನಾಡಿ ನಮ್ಮ ದೇಶ llತೆಯೇ ರಾಜಕೀಯವಾಗಿ ಅಧಿಕಾರ ಸಿಕ್ಕಾಗ ಅದರ ಸದುಪಯೋಗ ಹಾಗೂ ಅರ್ಥಪೂರ್ಣ ಸೇವೆ ಸಲ್ಲಿಸುವುದು ಹೇಗೆ ಎಂಬುದನ್ನು ಲಾಲ್ ಬಹದ್ದೂರ್ ಶಾಸ್ತ್ರೀಜೀ ತೋರಿಸಿಕೊಟ್ಟಿದ್ದಾರೆ ಇಂತಹ ಆಚರಣೆಗಳ ಮೂಲಕ ಅವರ ಜೀವನಾದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಈ ವೇಳೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಸೋಮಶೇಖರ್ ಬಿ.ಎನ್. ರವರ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು.
ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಲಯನ್ ಎ.ನಂಜಪ್ಪ ತಾಲೂಕು ಅಧ್ಯಕ್ಷ ಶಿವಕುಮಾರ್ (ವೈರ್) ತಾಲೂಕು ಉಪಾಧ್ಯಕ್ಷ ಜೆ.ಶಿವಕುಮಾರ್ ಪದಾಧಿಕಾರಿಗಳಾದ ಪ್ರಮೋದ್, ಮಂಜುನಾಥ್, ಗೋಪಿ, ಅನಿಲ್, ನಗರ ಪ್ರಧಾನ ಕಾರ್ಯದರ್ಶಿ ವೆಂಕೋಬ ವೇಣು, ರಾಜು, ಮಹಿಳಾ ಜಿಲ್ಲಾ ಮುಖಂಡರಾದ ಕಂದಮಣಿ, ತಾಲೂಕು ಮುಖಂಡರಾದ ಪದ್ಮಾ,ನಾಗಮಣಿ, ಪದ್ಮ,ಸೇರಿದಂತೆ ಹಲವರು ಹಾಜರಿದ್ದರು.




