
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 289 ವಿಷ್ಯರ್ಥಿಗಳಿಗೆ ಸುಜ್ಞಾನನಿದಿ ಶಿಷ್ಯವೇತನ ವಿತರಣೆ ಮಾಡಲಾಯಿತು

ತಾಲೂಕಿನ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆದ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ಸಂಘದ ಸದಸ್ಯರ ಮಕ್ಕಳಿಗೆ ಸುಜ್ಞಾನ ನಿಧಿ ಕಾರ್ಯಕ್ರಮದಲ್ಲಿ 2026/27 ನೇ ಸಾಲಿನ ಅರ್ಹ 80 ವಿದ್ಯಾರ್ಥಿಗಳಿಗೆ ಮತ್ತು 209 ವಿದ್ಯಾರ್ಥಿಗಳಿಗೆ ಈ ಹಿಂದೆ ವಿದ್ಯಾರ್ಥಿ ವೇತನ ನೀಡುತ್ತಿದ್ದು ಪ್ರಸ್ತುತ ರಿನಿವಲ್ ಮಂಜೂರಾದ ಆದ ಸುಜ್ಞಾನನಿದಿ ಶಿಷ್ಯವೇತನ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮಾರಬ್ಬ ಮಾತಾನಾಡಿ ಕಳೆದ ಐದು ವರ್ಷಗಳಿಂದ ಸ್ವಸಹಾಯ ಸಂಘದ ಸದಸ್ಯರ ಮಕ್ಕಳು ಉನ್ನತ ವ್ಯಾಸಂಗ ಮಾಡುವ ಅವರ ಆಸೆಗಳಿಗೆ ಪೂರಕವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಈ ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನ ಒದಗಿಸುತ್ತ ಬಂದಿದೆ ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ನಿವೃತ್ತ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಕೆ ಮಹಾಲಿಂಗಯ್ಯ ಮಾತಾನಾಡಿ ವಿದ್ಯಾರ್ಥಿ ಜೀವನ ಅತೀ ಮುಖ್ಯವಾದುದ್ದು.ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಬೇಕು, ಶಾಲಾ ಕಾಲೇಜುಗಳಲ್ಲಿ ಅತಿ ಹೆಚ್ಚು ದುಶ್ಚಟಗಳಿಗೆ ಬಲಿಯಾಗುವ ಮೂಲಕ ಯುವ ಜನತೆ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಎಂದು ತಿಳಿಸಿದರು.
ತಂತ್ರಜ್ಞಾನದ ಜೊತೆ ಪುಸ್ತಕಗಳ ಓದುವಿಕೆ ಕಲಿಯುವಿಕೆ ಆಲಿಸುವಿಕೆ ಬಗ್ಗೆ ಗಮನ ನೀಡಬೇಕು ಕನ್ನಡ ವನ್ನು ಉಳಿಸುವಂತಹ ಜವಾಬ್ದಾರಿ ವಿದ್ಯಾರ್ಥಿಗಳದ್ದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭಾ ಅಧ್ಯಕ್ಷರಾದ ಪ್ರಭಾನಾಗರಾಜು ಮಾತನಾಡಿ ಪ್ರಸ್ತುತ ವಿದ್ಯಮಾನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳವಾಗುತ್ತಿದೆ ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನಗಳ ಜೊತೆಗೆ ಪುಸ್ತಕಗಳ ಓದುವಿಕೆ ಕಡೆ ಗಮನ ನೀಡಬೇಕು ಏಕೆಂದರೆ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದ್ದು ಅನ್ಯ ರಾಜ್ಯಗಳ ವಿದ್ಯಾರ್ಥಿಗಳು ಹೆಚ್ಚಾಗಿ ನಮ್ಮ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಇವರು ಮಾದಕ ವಸ್ತುಗಳಿಗೆ ಬಲಿಯಾಗಿ ಸ್ಥಳೀಯ ವಿದ್ಯಾರ್ಥಿಗಳು ಕೂಡ ಈ ವ್ಯಸನಗಳಿಗೆ ಬಲಿಯಾಗುವಂತೆ ಮಾಡುತ್ತಿದ್ದಾರೆ.
ಪೋಷಕರು ಮಕ್ಕಳಿಗೆ ದುಶ್ಚಟ ಬಗ್ಗೆ ಮಾಹಿತಿಗಳನ್ನು ನೀಡಬೇಕು ಮನೆಯಲ್ಲಿ ಉತ್ತಮ ವಾತಾವರಣವನ್ನು ಒದಗಿಸುತ್ತಾ ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಪೋಷಕರ ಪಾತ್ರ ಅತಿ ಮುಖ್ಯವಾದದ್ದು ಇದನ್ನು ವಿದ್ಯಾರ್ಥಿಗಳು ಅರಿತು ತಮ್ಮ ವಿದ್ಯಾರ್ಥಿಜೀವನ ಉತ್ತಮವಾಗಿರಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ದಿನೇಶ್,ಗಣ್ಯರಾದ ನಾಗರಾಜು,ತಾಲೂಕು ಕೃಷಿ ಮೇಲ್ವಿಚಾರಕರಾದ ಲೋಹಿತ್, ಅನ್ನದಾಸೋಹಿ ಮಲ್ಲೇಶ್, ಸಮಾಜಸೇವಕರಾದ ಸೆಲ್ವಂ, ಸಂತೋಷ್ (ಪೊಲೀಸ್ ಇಲಾಖೆ ), ಕಲಾವಿದರಾದ ವೆಂಕಟರಾಜು ಸೇರಿದಂತೆ ಕನ್ನಡ ಪರ ಸಂಘಟನೆಯ ಪ್ರಮುಖರು , ಯೋಜನಾ ಕಛೇರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರು,ಸಂಘದ ಸದಸ್ಯರು ಉಪಸ್ಥಿತರಿದ್ದರು.




