
ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರದ ಕೊನಘಟ್ಟ ಲೆಜೆಂಡ್ಸ್ ಹಾಗೂ ಬೋಧಿವೃಕ್ಷ ಎಜುಕೇಷನಲ್ ಸೋಶಿಯಲ್ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.
ತಾಲೂಕಿನ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರದ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಕ್ಕೆ ಉಪಯುಕ್ತವಾದ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೊಂದು ವಿಶೇಷ ಅರ್ಥ ಬರುತ್ತದೆ. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ನಮ್ಮ ಬದುಕಿಗೆ ಸಾರ್ಥಕತೆ ದೊರೆಯುತ್ತದೆ. ಸಮಾಜದಲ್ಲಿ ಅಶಕ್ತರಿಗೆ ಹಾಗೂ ಅವಶ್ಯವಿರುರವವರಿಗೆ ನಮ್ಮ ಕೈಲಾದ ಸೇವೆ ಮಾಡಬೇಕಿದೆ ಎಂದರು.
ಈ ವೇಳೆ ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್(ಅಪ್ಪಿ ), ಘಾಟಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರವಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಟಿ.ವೆಂಕಟರಮಣಯ್ಯ, ಸದಸ್ಯರಾದ ಮುನಿರಾಜು, ಕೃಷ್ಣಮೂರ್ತಿ, ಮುಖಂಡರಾದ ಜೋಗಿ, ವೆಂಕಟೇಶ್, ಚುಂಚೇಗೌಡ, ಟಿಎಪಿಎಂಸಿಎನ್ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.




