
ದೊಡ್ಡಬಳ್ಳಾಪುರ : ನಾಳೆ (ಅ. 24) ಬೆಳಿಗ್ಗೆ 10.30 ಕ್ಕೆ ಬರದಿಂದ ಸಂಕಷ್ಟ ಅನುಭವಿಸುತ್ತಿರುವ ಅನ್ನದಾತರ ಸಹಾಯಕ್ಕಾಗಿ ಸುಮಾರು 4,000 ಕ್ಕೂ ಅಧಿಕ ಪಾಣಿದಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪಾಲಿಸಿ ಪ್ರತಿಯ ವಿತರಣಾ ಕಾರ್ಯಕ್ರಮವನ್ನು ಶಾಸಕರ ನಿವಾಸದಲ್ಲಿ ಏರ್ಪಡಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ಈ ಕುರಿತು ಮಾಹಿತಿ ನೀಡಿರುವ ಅವರು ರೈತ ಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬರದಿಂದ ಸಂಕಷ್ಟ ಅನುಭವಿಸುತ್ತಿರುವ ಸುಮಾರು 4,000 ಕ್ಕೂ ಅಧಿಕ ರೈತರ ಸಹಾಯಕ್ಕಾಗಿ ಫಸಲ್ ಬಿಮಾ ಯೋಜನೆಯ ಪ್ರೀಮಿಯಂಗಳನ್ನು ಶಾಸಕರ ಕಚೇರಿ ಮತ್ತು ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಭರಿಸಲಾಗಿತ್ತು.ನಾಳೆ ಬಿಜೆಪಿ ರಾಜ್ಯ ಪ್ರಮುಖರ ಸಮ್ಮುಖದಲ್ಲಿ ಪಾಣಿದಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪಾಲಿಸಿ ಪ್ರತಿಯ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮತ್ತು ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.
ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ,ಚಿಕ್ಕಬಳ್ಳಾಪುರ ಲೋಕಸಭಾ ಸಂಸದರಾದ ಡಾ. ಕೆ. ಸುಧಾಕರ್, ಯಲಹಂಕ ಶಾಸಕರಾದ ಎಸ್. ಆರ್. ವಿಶ್ವನಾಥ್ ಅವರು ಸೇರಿದಂತೆ ಅನೇಕ ನಾಯಕರು ಮತ್ತು ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.




