
ದೊಡ್ಡಬಳ್ಳಾಪುರ : ರಾಜ್ಯ ಸರಕಾರ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿದ್ದು, ಸರ್ಕಾರದ ಈ ನೆಡೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ ) ವತಿಯಿಂದ ನಗರದ ಕೆಎಸ್ ಆರ್ ಟಿ ಸಿ ನಿಲ್ದಾಣದಲ್ಲಿ ಸಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದರು.

ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಗಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ ) ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ ಸಾಮಾನ್ಯ ಜನತೆ ಈಗಾಗಲೇ ಸಂಕಷ್ಟದಲ್ಲಿದ್ದಾರೆ ರಾಜ್ಯದಲ್ಲೆ ಬರ ಪರಿಸ್ಥಿತಿ ಎದುರಾಗಿದೆ ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಬಡವರ ಜೇಬಿಗೆ ಕತ್ತರಿ ಹಾಕುವ ನೀತಿ ಪಾಲನೆ ಮಾಡುತ್ತಿದೆ. ಮೊದಲು ಎಲ್ಲರಿಗೂ ಉಚಿತ ಉಚಿತ ಎಂದು ಬೊಬ್ಬೆ ಹೊಡೆದು ಈಗ ಪ್ರತಿನಿತ್ಯ ಬಳಸುವ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದೆ ಅಲ್ಲದೆ ಈಗ ಸಾರ್ವಜನಿಕರಿಗೆ ಸಂಪರ್ಕ ಸಾಧನವಾದ ಬಸ್ ದರವನ್ನು ಕೂಡ ಹೆಚ್ಚಿಗೆ ಮಾಡಿದ್ದು, ನೇರವಾಗಿ ರಾಜ್ಯದ ಜನತೆಯ ಹಣವನ್ನು ಲೂಟಿ ಮಾಡಲು ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಪ್ರವೀಣ್ ಶೆಟ್ಟಿ ಬಣ ಖಂಡಿಸುತ್ತದೆ ಎಂದರು.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲಿಟ್ಟಿದ್ದ ಭರವಸೆ ಹುಸಿಯಾಗಿದೆ
ಡಿಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ನಮ್ಮೆಲ್ಲರಿಗೂ ಅವರ ಮೇಲೆ ಸಾಕಷ್ಟು ಭರವಸೆ ಇತ್ತು, ರಾಜ್ಯದ ಜನತೆಗಾಗಿ ಉತ್ತಮ ಯೋಜನೆಗಳನ್ನು ರೂಪಿಸುವ ಮೂಲಕ ಉತ್ತಮ ಆಡಳಿತ ನೀಡುತ್ತಾರೆ ಎಂಬ ನಂಬಿಕೆ ಇತ್ತು ಆದರೆ ಈಗ ಪದೇ ಪದೇ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಅನಿಸುತ್ತಿದೆ ನಾವು ಅವರ ಮೇಲಿಟ್ಟಿದ್ದ ನಂಬಿಕೆ ಹುಸಿಯಾಗಿದೆ ಎಂದರು.
ಕೂಲಿ ಕಾರ್ಮಿಕರು ಉದ್ಯೋಗಿಗಳು ವಿದ್ಯಾರ್ಥಿಗಳು ಪ್ರತಿನಿತ್ಯ ಬಳಸುವ ಕೆಎಸ್ಆರ್ಟಿಸಿ ಬಸ್ ಗಳ ಪ್ರಯಾಣಿಕ ದರವನ್ನು ಹೆಚ್ಚಿಸಿರುವುದು ಬಡವರ ಹೊಟ್ಟೆಯ ಮೇಲೆ ಬರೆ ಎಳೆದಂತಾಗಿದೆ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ರಾಜ್ಯದ ಜನತೆಯ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸುವ ಮೂಲಕ ನಾಡಿನ ಜನತೆಯ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದರು.
ಬಸ್ ದರವನ್ನ ಶೇಕಡಾ 35ರಷ್ಟು ಏರಿಕೆ ಮಾಡಲಾಗಿದೆ, ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ನೀಡುವಂತೆ ಯಾರು ಹೇಳಿದ್ರು ಇವರಿಗೆ,ಬಸ್ ಗಳಲ್ಲಿ ಹೆಣ್ಣು ಮಕ್ಕಳೇ ತುಂಬಿರುತ್ತಾರೆ, ಇದರ ಹೊರೆ ಯಾರು ಹೊರುತ್ತಾರೆ ಎಂಬುದನ್ನ ಸರ್ಕಾರ ಯೋಚಿಸ ಬೇಕಿತ್ತು ಎಂದರು.

ರೈತರಿಗಾಗಿ ಹಾಲಿನ ದರ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ ಎಂದು ಬಸ್ ಪ್ರಯಾಣ ದರ ಏರಿಕೆ ಮಾಡುವ ಸರ್ಕಾರ, ಇದೇ ಕಬ್ಬಿನ ಬೆಲೆಯನ್ನ ಏರಿಕೆ ಮಾಡುವಂತೆ ಒಂದು ತಿಂಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ, ಆದರೆ ಸರ್ಕಾರ ಕಬ್ಬಿನ ಬೆಲೆ ಏರಿಕೆ ಮಾಡಿಲ್ಲ. ಅವೈಜ್ಞಾನಿಕವಾಗಿ ಮಾಡಿರುವ ಬೆಲೆ ಏರಿಕೆಯನ್ನ ಸರ್ಕಾರ ಕೈಬಿಡುವಂತೆ ಒತ್ತಾಯಿಸಿದರು.




